ನೂತನ ತಂತ್ರಜ್ಞಾನದೊಂದಿಗೆ ಮತ್ತೆ ತೆರೆಗೆ ಬರ್ತಿದ್ದಾರೆ ಕನ್ವರ್ ಲಾಲ್..!!

06-Feb-2019

ಒಂದು  ಕಾಲದಲ್ಲಿ ಕನ್ನಡ ಇಂಡಸ್ಟ್ರಿಗೆ ಬ್ರೇಕ್ ಕೊಟ್ಟ ಸಿನಿಮಾಗಳಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅಭಿನಯದ ‘ಅಂತ’ ಸಿನಿಮಾ ಕೂಡ ಒಂದು..80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನು ಬರೆದ ಚಿತ್ರ 'ಅಂತ'. 1981ರಲ್ಲಿ ಬಿಡುಗಡೆಯಾಗಿದ್ದ 'ಅಂತ' ಚಿತ್ರಕ್ಕೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದ್ದರು. ರೆಬೆಲ್ ಸ್ಟಾರ್ ಅಂಬರೀಶ್ ಇನ್ಸ್ ಪೆಕ್ಟರ್ ಸುಶೀಲ್ ಕುಮಾರ್ ಪಾತ್ರದ ಮೂಲಕ ನಾಡಿನ ಜನತೆಯಲ್ಲಿ ದೇಶಾಭಿಮಾನವನ್ನು ಸಾರಿದ್ದರು.ಅಷ್ಟೆ ಅಲ್ಲದೇ, 'ಕನ್ವರ್ ಲಾಲ್' ಎಂಬ ನೆಗೆಟಿವ್ ಪಾತ್ರವನ್ನು ಕೂಡ 'ಅಂತ' ಚಿತ್ರದಲ್ಲಿ ಅಂಬರೀಶ್ ಮಾಡಿದ್ದರು.. 'ಕುತ್ತೇ ಕನ್ವರ್ ನಹೀ.... ಕನ್ವರ್ ಲಾಲ್ ಬೋಲೋ..' ಡೈಲಾಗ್ ಅಂಬರೀಶ್ಗೆ ಸಿಕ್ಕಾಪಟ್ಟೆ ಹೆಸರು ತಂದು ಕೊಟ್ಟಿತ್ತು..'ಸುಧಾ' ವಾರಪತ್ರಿಕೆಯಲ್ಲಿ ಪ್ರಕಟವಾದ ಹೆಚ್.ಕೆ.ಅನಂತರಾವ್ ಅವರ ಕಾದಂಬರಿಯನ್ನು ಆಧರಿಸಿ ನಿರ್ಮಾಣವಾದ 'ಅಂತ' ಚಿತ್ರ ಇದೀಗ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ರೀ ರಿಲೀಸ್ ಆಗಲಿದೆ.

38 ವರ್ಷಗಳ ಬಳಿಕ 'ಅಂತ' ಸಿನಿಮಾ ರೀ ರಿಲೀಸ್ ಆಗುತ್ತಿದೆ.. ನೂತನ ತಂತ್ರಜ್ಞಾನದೊಂದಿಗೆ ಸದ್ಯದಲ್ಲೇ 'ಅಂತ' ಸಿನಿಮಾ ಬೆಳ್ಳಿತೆರೆ ಮೇಲೆ ಬಂದು ಸಿನಿರಸಿಕರನ್ನು ರಂಜಿಸಲಿದೆ. ಪರಿಮಳ ಆರ್ಟ್ ಮೂಲಕ ಹೆಚ್.ಎನ್.ಮಾರುತಿ ಹಾಗೂ ವೇಣುಗೋಪಾಲ್ ‘ಅಂತ’ ಸಿನಿಮಾವನ್ನು ನಿರ್ಮಿಸಿದ್ದರು. ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು. ಜಿ.ಕೆ.ವೆಂಕಟೇಶ್ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿದ್ದ 'ಅಂತ' ಚಿತ್ರದ ಸುಮಧುರ ಗೀತೆಗಳು ಇಂದಿಗೂ ಜನರ ಬಾಯಲ್ಲಿ ಕೇಳಿಬರುತ್ತಿರುತ್ತವೆ…. ಈ ಚಿತ್ರವನ್ನು ಈಗ ಡಿಜಿಟಲ್ ಫಾರ್ಮಾಟ್ ನಲ್ಲಿ ಬಿಡುಗಡೆ ಮಾಡಲು ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಚಿತ್ರದ ಹಕ್ಕುಗಳು ಲಹರಿ ರೆಕಾರ್ಡಿಂಗ್ ಸಂಸ್ಥೆಯ ಬಳಿ ಇದೆ.. ಲಹರಿ ಸಂಸ್ಥೆಯ ಮುಖಾಂತರ ದೀಪಕ್ ಪಿಕ್ಚರ್ಸ್ ಹಾಗೂ ಶ್ರೀನಿವಾಸ ಪಿಕ್ಚರ್ಸ್(ಗದಗ) ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ನೂತನ ತಂತ್ರಜಜ್ಞಾನದೊಂದಿಗೆ ಅಂತ ಸಿನಿಮಾವನ್ನು ಕಣ್ತುಂಬಿಕೊಳ್ಳಬಹುದು.

ಚಲನಚಿತ್ರ ಹಾಗು ನಟ ನಟಿಯರ ನಿರಂತರ ಸುದ್ದಿಗಾಗಿ ದಯವಿಟ್ಟು ಕೆಳಗಡೆ ಇರುವ ನಮ್ಮ ಫೇಸ್ಬುಕ್ ಗ್ರೂಪ್ ಗೆ ಜಾಯಿನ್ ಆಗಿ. ಧನ್ಯವಾದಗಳು

0 Comments

Leave a comment

x

Login

Remember me
Forgot password ?
x

sign up

  Share on Facebook

  Share on Whatsapp